ಅಬುಧಾಬಿಯಲ್ಲಿ ಶ್ರೀ ಸ್ವಾಮಿ ನಾರಾಯಣ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿಯವರು ಶಂಕು ಸ್ಥಾಪನೆ ನೆರವೇರಿಸಿದರು

ದುಬೈ:ಫೆ-11: ಅಬುಧಾಬಿಯಲ್ಲಿ ಶ್ರೀ ಸ್ವಾಮಿ ನಾರಾಯಣ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿಯವರು ದುಬೈನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದರು.

ದುಬೈ- ಅಬು ದಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಿಸಲಾಗುತ್ತಿದೆ. ದುಬೈನ್ ಒಪೇರಾ ಹೌಸ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ಪ್ರಧಾನಿ ಭೂಮಿ ಪೂಜೆ ನೆರವೇರಿಸಿದರು.

14 ಎಕರೆಯಷ್ಟು ಬೃಹತ್ ಜಾಗವನ್ನು ದೇಗುಲ ನಿರ್ಮಾಣಕ್ಕೆ ನೀಡಲಾಗಿದೆ. ಈ ಪೈಕಿ 5 ಎಕರೆ ವಿಸ್ತೀರ್ಣದಲ್ಲಿ ದೇಗುಲ ನಿರ್ಮಾಣವಾಗಲಿದೆ. ಉಳಿದ ಜಾಗದಲ್ಲಿ ವಿವಿಧ ಧಾರ್ಮಿಕ ಚಟುವಟಿಕೆಯ ಕೇಂದ್ರಗಳು ನಿರ್ಮಾಣವಾಗಲಿದ್ದು, 2020ರ ವೇಳೆಗೆ ಈ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸವಿದೆ. ಈ ದೇಗುಲ ನಿರ್ಮಾಣ ಚಟುವಟಿಕೆಗಳಿಗೆ ಭಾರತೀಯ ಸಮುದಾಯದವರ ಸಮಿತಿಯೊಂದನ್ನು ರಚಿಸಲಾಗಿದ್ದು, ಇದರ ನೇತೃತ್ವವನ್ನು ಕನ್ನಡಿಗ ಬಿ.ಆರ್.ಶೆಟ್ಟಿ ವಹಿಸಿಕೊಂಡಿದ್ದಾರೆ.

55 ಸಾವಿರ ಚದರ ಮೀಟರ್ ವಿಸ್ತೀರ್ಣದಲ್ಲಿ ಸ್ಥಾಪನೆಯಾಗುತ್ತಿರುವ ಈ ದೇವಾಲಯ, ದುಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಾಪನೆಯಾಗುತ್ತಿರುವ ಮೊದಲು ಕಲ್ಲಿನ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ