ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು

ಬೆಂಗಳೂರು,ಫೆ.12-ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಂಗೇರಿ ನಿವಾಸಿ ಜಯಮ್ಮ(62) ಮೃತಪಟ್ಟ ದುರ್ದೈವಿ.
ನಿನ್ನೆ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಜಯಮ್ಮ ಬಜಾಜ್ ಸ್ಟ್ರೀಟ್ ಕಡೆಯಿಂದ ತಮ್ಮ ಮನೆಗೆ ಹೋಗುತ್ತಿದ್ದರು. ಸಕ್ಕೂರು ಜಂಕ್ಷನ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು , ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ.
ಕೆಂಗೇರಿ ಸಂಚಾರಿ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಫೋಟೋ ಕ್ರೆಡಿಟ್: etemaad.com(ಪ್ರಾತಿನಿಧ್ಯಕ್ಕಾಗಿ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ