ಸಾಲದ ಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

ದಾವಣಗೆರೆ,ಫೆ.12- ಸಾಲದ ಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ಕಂದನಕೊವಿ ಗ್ರಾಮದ ಕೆ.ಆರ್.ಶಿವರಾಜ್(55) ಆತ್ಮಹತ್ಯೆ ಮಾಡಿಕೊಂಡ ರೈತ.
ಈತನ ತಂದೆ ಹೆಸರಿನಲ್ಲಿ ಎರಡೂವರೆ ಎಕರೆ ಜಮೀನಿನಿದ್ದು ಎಕರೆ ತೋಟವಿತ್ತು. ಈತ ಪ್ರಗತಿ ಗ್ರಾಮೀಣ ಬ್ಯಾಂಕ್ನಲ್ಲಿ ಎರಡು ಲಕ್ಷ ರೂ. ಸಾಲ ಮಾಡಿದ್ದು , ಸ್ವತಃ ಐದು ಲಕ್ಷ ರೂ. ಸಾಲ ಮಾಡಿದ್ದರು.
ಸಾಲಗಾರರ ಕಿರುಕುಳಕ್ಕೆ ಬೇಸತ್ತು ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮಾಂತರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಫೋಟೋ ಕ್ರೆಡಿಟ್: indiatoday.com(ಪ್ರಾತಿನಿಧ್ಯಕ್ಕಾಗಿ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ