ಭ್ರಷ್ಟಾಚಾರಿಗಳನ್ನು ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡಬೇಡಿ ಮೋದಿಗೆ ಸಲಹೆ

ರಾಯಚೂರು- ಐದು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಕರ್ನಾಟಕದ ಘನತೆ, ಗೌರವದ ಬಗ್ಗೆ ಮಾತಾಡುವುದು ಬಿಡಿ ಕರ್ನಾಟಕದ ಜನತೆ ಸಿಎಂ, ಪರಮೇಶ್ವರ್ ಬಗ್ಗೆ ಅಭಿಮಾನ ಇಟ್ಟಿದ್ದಾರೆ  ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

 

ಜನಾಶಿರ್ವಾದ ಯಾತ್ರೆಯ ನಿಮಿತ್ತ ಸಿಂಧನೂರು ಪಟ್ಟಣದಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿ ಬಸವಣ್ಣನವರ ಹೆಸರು ಹೇಳಿತ್ತಿರಿ ಬಸವಣ್ಣನವರು ಕಾಯಕವೇ ಕೈಲಾಸ ಎಂದಿದ್ದಾರೆ ಅದನ್ನು ಅನುಷ್ಠಾನಕ್ಕೆ ತಂದು ನಮ್ಮ ಮುಂದೆ ಮಾತನಾಡಿ, ನೀವು ಕರ್ನಾಟಕಕ್ಕೆ ಬಂದಾಗ ಯಡಿಯೂರಪ್ಪ ಕುಳಿತಿರುತ್ತಾರೆ

ಎಡ-ಬಲ ಭ್ರಷ್ಟ ನಾಯಕರನ್ನು ಕೂಡಿಸಿಕೊಂಡು ಭ್ರಷ್ಟಚಾರದ ಬಗ್ಗೆ ಮಾತನಾಡಬೇಡಿ ಎಂದು ಮೋದಿಗೆ ಸಲಹೆ ನೀಡಿದರು.

 

ಬರಿ ಸುಳ್ಳು ಮಾತನಾಡುವದನ್ನು ಬಿಟ್ಟು ರಾಜ್ಯದ ರೈತರ ಹಿತ ದೃಷ್ಟಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡುವದರ ಮೂಲಕ ನಿಮ್ಮ ಪ್ರಾಮಾಣಿಕತೆಯನ್ನು ತೋರಿಸಿ ನಂತರ ಮಾತನಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಸಾಲ ಮನ್ನಾ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಿದ್ದಾರೆ. ರೈತರು, ಹಿಂದುಳಿದ, ಬಡವರು, ಶ್ರಮಿಕರು ಎಲ್ಲರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬೆಂಬಲಿಸುವಂತೆ ರಾಹುಲ್ ಅವರು ಜನರಲ್ಲಿ ಈ ಸಂದರ್ಭದಲ್ಲಿ ಮನವಿ ಮಾಡಿದರು.

 

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿದಾನ ಪರಿಷತ್ ಸದಸ್ಯ ಎನ್ ಎಸ್ ಬೋಸರಾಜ್, ಬಸನಗೌಡ ಬಾದರ್ಲಿ  ಸಚಿವ ಬಸವರಾಜರಾಯರೆಡ್ಡಿ,  ಶಾಸಕ ಹಂಪನಗೌಡ ಬಾದರ್ಲಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ