ನವದೆಹಲಿ,ಫೆ.12-ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಉದ್ಯಾನನಗರಿ ಬೆಂಗಳೂರಿನ ಬೆಳ್ಳಂದೂರು ಕೆರೆ ಮಾಲಿನ್ಯ ಮತ್ತು ಬೆಂಕಿ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಅಧೀನ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿಖ್ರಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠವು ಈ ಬಗ್ಗೆ ಪ್ರತ್ಯುತ್ತರ ನೀಡುವಂತೆ ನೋಟಿಸ್ ನೀಡಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ಜಿಟಿ) ನೀಡಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ ಲಿಲ್ಲೆ ರಿಯಾಲಿಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು. ಈ ಸಂಬಂಧ ಸರ್ಕಾರ ಮತ್ತು ಅಧೀನ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕೆರೆ ಮಾಲಿನ್ಯದ ಗಂಭೀರ ಪ್ರಕರಣದ ಕುರಿತು ಪ್ರತ್ಯುತ್ತರ ನೀಡುವಂತೆ ನೋಟಿಸ್ನಲ್ಲಿ ತಿಳಿಸಿದೆ.
ಫೋಟೋ ಕ್ರೆಡಿಟ್: indiatoday.com