ಬೆಂಗಳೂರು, ಫೆ.13-ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನು? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಜನಾಶೀರ್ವಾದ ಯಾತ್ರೆ ವೇಳೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಬಿಎಸ್ವೈ ಟ್ವೀಟ್ ಕುರಿತು ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಉತ್ತರಿಸಿದ ಅವರು, ಕೆಲವು ದೇವರಿಗೆ ಮಾಂಸಾಹಾರವೇ ಪ್ರಿಯ. ಮನಸ್ಸು ಶುದ್ಧವಿಲ್ಲದೆ ದೇವಸ್ಥಾನಕ್ಕೆ ಹೋಗಿ ಏನು ಪ್ರಯೋಜನ? ಎಂದರು.
ಈ ಬಗ್ಗೆ ನಾನು ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ನಮ್ಮ ದೇಹವೇ ಒಂದು ಮಾಂಸದ ಮುದ್ದೆ. ಹಾಗಾಗಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದರೆ ತಪ್ಪೇನು ಎಂದರು.