ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಯೋಜನೆಯಲ್ಲ – ದಗ್ಗುಬಾಟಿ ಪುರಂದರೇಶ್ವರಿ

New Delhi: Former UPA minister Daggubati Purandeswari meets BJP President Rajnath_Singh in New Delhi on Friday. PTI Photo (PTI3_7_2014_000113B). [Andhra Pradesh, Mug shot, Daggubati Purandeshwari]

ಬಳ್ಳಾರಿ, ಫೆ.15-ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಯೋಜನೆಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ದಗ್ಗುಬಾಟಿ ಪುರಂದರೇಶ್ವರಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹಾಗೂ ಹಿಂದೂ ಕಾರ್ಯಕರ್ತರ ಕೊಲೆ ಹೆಚ್ಚಾಗುತ್ತಿದೆ. ಆದರೆ ಇವುಗಳ ತನಿಖೆ ಸರಿಯಾಗಿ ಆಗುತ್ತಿಲ್ಲ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಅದೇ ರೀತಿ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಹಿಡಿಯಬೇಕಿದೆ. ರೈತರ ಸಾಲಮನ್ನಾ ರಾಜ್ಯಸರ್ಕಾರಕ್ಕೆ ಸೇರಿದ್ದು. ಕೇಂದ್ರ ಸರ್ಕಾರ ಪಲಾಯನವಾದಿಯಲ್ಲ ಎಂದು ಸಮರ್ಥಿಸಿಕೊಂಡರು.

ಯು.ಪಿ. ಮತ್ತು ಮಹಾರಾಷ್ಟ್ರಗಳಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮಾಡಲಿ. ಕೇಂದ್ರದ ಮೇಲೆ ಪದೇ ಪದೇ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ರೈತರ ಆತ್ಮಹತ್ಯೆ ಸೇರಿದಂತೆ ಬೆಳೆ, ನೀರಾವರಿ ಇನ್ನಿತರ ಸಮಸ್ಯೆಗಳಿಗೆ ರಾಜ್ಯಸರ್ಕಾರವೇ ನೇರ ಹೊಣೆ. ಅವರಿಗೆ ಅಗತ್ಯವಾದ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ