ಹುಬ್ಬಳ್ಳಿ, ಫೆ.15-ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಹದಾಯಿ ಯೋಜನೆ ಜಾರಿಗಾಗಿ ನಡೆಯುತ್ತಿರುವ ಹೋರಾಟದ ವೇಳೆ ಸರ್ಕಾರದ ಆಸ್ತಿ-ಪಾಸ್ತಿ ಹಾನಿಯಾದ ಹಿನ್ನೆಲೆ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಹೇಳಿದ್ದ ರಾಜ್ಯಸರ್ಕಾರ, ಈಗ ಮತ್ತೆ ರೈತರ ಮೇಲೆ ಗದಾಪ್ರಹಾರ ಮಾಡಲು ಹೊರಟಿದೆ. ಮಹದಾಯಿ ಹೋರಾಟಗಾರರಿಗೆ ಕೊಟ್ಟ ಮಾತು ತಪ್ಪಿದೆ ಎಂದು ಹೋರಾಟಗಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಹೋರಾಟಗಾರರಲ್ಲಿ ಪ್ರಮುಖವಾಗಿ ಲೋಕನಾಥ್ ಹೆಬಸೂರ್ ಸೇರಿದಂತೆ 13 ಜನರ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. ನವಲಗುಂದ ಜೆಎಫ್ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಇದೇ 13ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದೆ.