ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ವೇಳೆ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಗಲಾಟೆ

ಯಾದಗಿರಿ, ಫೆ.15-ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ವೇಳೆ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಗಲಾಟೆ ನಡೆದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಹಾಳ್ ಬಸ್ ನಿಲ್ದಾಣದ ಸೇವಾಲಾಲ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಸೇವಾಲಾಲ್ ಮಹಾರಾಜ್‍ರವರ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಮಾತಿನ ಚಕಮಕಿ ನಡೆದಿದೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಎರಡು ಸಮುದಾಯಗಳ ನಡುವೆ ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ಗಲಾಟೆ, ಘರ್ಷಣೆ ನಡೆದಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಕೆಂಬಾವಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಎರಡೂ ಸಮುದಾಯದ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ