ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ ಆರೋಪಿಗಳು.

ಬಂಧಿತರಿಂದ ಪೊಲೀಸರು 2.7 ಲಕ್ಷ ರೂ. ಹಾಗೂ ಒಂದು ಲ್ಯಾಪ್‍ಟಾಪ್, ಐದು ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು-ನೀಲಗಿರಿ ರಸ್ತೆಯಲ್ಲಿರುವ ಫೈವಿಸ್ತ ಹೊಟೇಲ್‍ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದ್ದ ಏಕದಿನ ಕ್ರಿಕೆಟ್ ಪಂದ್ಯದ ಬಗ್ಗೆ ಆರೋಪಿಗಳು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.

ಖಚಿತ ಮಾಹಿತಿ ಆಧರಿಸಿ ಡಿಸಿಪಿ ವಿಕ್ರಂ ಬಿ.ಅಮಟೆ ಅವರ ಮಾರ್ಗದರ್ಶನದಲ್ಲಿ ಸಿಸಿಬಿಯ ಎಸಿಪಿ ಲಿಂಗಪ್ಪ ಅವರ ನೇತೃತ್ವದಲ್ಲಿ ಸಿಸಿಬಿ ಇನ್ಸ್‍ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ