ಅರುಣಾಚಲಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ರಾಜತಾಂತ್ರಿಕ ಪ್ರತಿಭಟನೆ

ಬೀಜಿಂಗ್:ಫೆ-15: ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಹೇಳಿದೆ.

ಪ್ರಧಾನಿ ಮೋದಿ ಅವರು ಇಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಗೆಂಗ್ ಶುವಾಂಗ್ ಅವರು, ಚೀನಾ-ಭಾರತ ಗಡಿಯಲ್ಲಿ ಚೀನಾದ ಸ್ಥಾನ ಸ್ಥಿರ ಮತ್ತು ಸ್ಪಷ್ಟವಾಗಿದೆ ಎಂದಿದ್ದಾರೆ. ವಿವಾದಿತ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವುದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ ಮತ್ತು ಈ ಕುರಿತು ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಗೆಂಗ್‌ ಶುವಾಂಗ್‌ ಹೇಳಿರುವುದನ್ನು ಉಲ್ಲೇಖೀಸಿ ಚೀನದ ಸರಕಾರಿ ಒಡೆತನದ ಕ್ಸಿನ್‌ ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಧಾನಿ ಮೋದಿಯವರು ತ್ರಿಪುರಾಕ್ಕೆ ಭೇಟಿ ನೀಡಿದ ನಂತರ ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ