ರಾಜ್ಯ ಬಜೆಟ್: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕೃಷಿ ವಲಯಕ್ಕೆ 5080ಕೋಟಿ ರೂ ನೀಡಲಾಗಿದೆ. 2018–19ನೇ ಸಾಲಿನಲ್ಲಿ ಕೃಷಿ ಇಲಾಖೆಗೆ ರು 5080 ಕೋಟಿ ನೀಡಲಾಗಿದೆ. ಪಶುಸಂಗೋಪನೆಗೆ 2245 ಕೋಟಿ ರೂಪಾಯಿ ಅನುದಾನ, ಜಲಸಂಪನ್ಮೂಲ ಇಲಾಖೆಗೆ 15,929 ಕೋಟಿ ಅನುದಾನ,ಸಣ್ಣ ನೀರಾವರಿಗೆ 2090 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕುಗಳಲ್ಲಿ ನಿಧನ ಹೊಂದಿದ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದಾರೆ.

ತೋಟಗಾರಿಕೆಗೆ 1091 ಕೋಟಿ ಅನುದಾನ, ರೇಷ್ಮೆ ಇಲಾಖೆಗೆ 429 ಕೋಟಿ, ಚನ್ನಪಟ್ಟಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ‘Live Museum’ ಸ್ಥಾಪನೆ, ಬೆಂಗಳೂರು, ಮೈಸೂರು ಕಾಡಿಡಾರ್‌ನಲ್ಲಿ ರೇಷ್ಮೆ ಟೂರಿಸಂ ಅಭಿವೃದ್ಧಿ ಉದ್ದೇಶ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿನ 1000 ಹಮಾಲರಿಗೆ ವಸತಿ ಸೌಲಭ್ಯ
ರೈತರಿಗೆ ಶೇ.3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿ ಸಾಲ ಘೋಷಿಲಾಗಿದೆ. ಶೇಂಗಾ ಬೆಳೆಗಾರರಿಗೆ 50 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ