ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾವೇರಿ ಜಲ ವಿವಾದ ಕುರಿತಂತೆ ಭಾರತ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದ ತೀರ್ಪು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ
ಮಾಜಿ ಮುಖ್ಯ ಮಂತ್ರಿಗಳು ಮತ್ತು ಬಜಪ ಅಧ್ಯಕ್ಷರು ಆದ ಬೀ ಎಸ್ ಯಡಿಯೂರಪ್ಪ
ಕಾವೇರಿ ನದಿ ನೀರು ಹಂಚಿಕೆ ಸಂಬಂಧ, ವಿಶೇಷವಾಗಿ ನಮ್ಮ ರಾಜ್ಯದ ರೈತರ ಮತ್ತು ಜನರ ನಿರೀಕ್ಷೆಗಳನ್ನು ಸ್ವಲ್ಪ ಮಟ್ಟಿಗೆ ಎತ್ತಿ ಹಿಡಿದಿರುವ ಸುಪ್ರೀಮ್ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ –
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
ಸುಮಾರು 20 ಟಿಎಂಸಿ ನೀರನ್ನು ಹೆಚ್ಚಾಗಿ ಬಳಸಿಕೊಳ್ಳಲು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ಸಂತಸ ತಂದಿದೆ ಎಂದು ಪ್ರತಿಕ್ರಿಯಿಸಿದರು. ತಮಿಳುನಾಡಿನಲ್ಲಿ 20 ಟಿಎಂಸಿ ಅಂತರ್ಜಲದ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ವಿಸ್ತರಣೆ ಮಾಡಲು ಸುಪ್ರೀಂಕೋರ್ಟ್ ಒಪ್ಪಿರುವುದು ಅತ್ಯಂತ ಖುಷಿಯ ವಿಷಯವಾಗಿದೆ.
ಆದರೆ ಬೆಂಗಳೂರಿಗೆ ನಿಗದಿ ಮಾಡಿರುವ ನೀರಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಅವರು ಹೇಳಿದರು.
ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ
ತೀರ್ಪು ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಇದೀಗ ಬಂದಿರುವ ತೀರ್ಪು ರಾಜ್ಯಕ್ಕೆ ಸ್ವಲ್ಪ ಮಟ್ಟಿನ ನೆಮ್ಮದಿ ತಂದಿದ್ದರೂ ಈ ಬಗ್ಗೆ ತೀರ್ಪಿನ ಪ್ರತಿಯನ್ನು ತೆಗೆದುಕೊಂಡು ಸಂಪೂರ್ಣ ಅಧ್ಯಯನ ಮಾಡುವ ಅಗತ್ಯವಿದೆ ಎಂದರು.
ನಾಳೆ ಹಿತರಕ್ಷಣಾ ಸಮಿತಿ ಸಭೆ ಕರೆದು ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರೊಂದಿಗೆ ಚರ್ಚಿಸಿ ಮೇಲ್ಮನೆಗೆ ಹೋಗಬೇಕೆ, ಬೇಡವೆ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
ಸಂಭ್ರಮ: ಕಾವೇರಿ ತೀರ್ಪು ಹೊರಬೀಳುತ್ತಿದ್ದಂತೆ ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮಂಡ್ಯದಲ್ಲಿ ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಸಾವಿರಾರು ರೈತರು ಬೀದಿಗಿಳಿದು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.