ಪ್ರಬಲ ಭೂಕಂಪಕ್ಕೆನಡುಗಿದದ ಮೆಕ್ಸಿಕೊ

 

ಮೆಕ್ಸಿಕೊ ಸಿಟಿ: ಆಗ್ನೇಯ ಮೆಕ್ಸಿಕೊದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ.

ಮೆಕ್ಸಿಕೊದ ಹಲವು ರಾಜ್ಯಗಳಲ್ಲಿ ಕಂಪನದ ಅನುಭವವಾಗಿದ್ದು ಜನರು ಭಯಭೀತರಾಗಿ ಕಾಲ ಕಳೆದಿರುವ ಬಗ್ಗೆ ವರದಿಯಾಗಿದೆ.

ಕರಾವಳಿ ಪ್ರದೇಶದಲ್ಲಿ ಯಾವುದೇ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿಲ್ಲ.ಹಲವು ಕಟ್ಟಡಗಳಲ್ಲಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು ಇದುವರೆಗೆ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಕಳೆದ ವರ್ಷ ಸಪ್ಟಂಬರ್‌ 7 ರಂದು ಮೆಕ್ಸಿಕೊದಲ್ಲಿ ಸಂಭವಿಸಿದ 8.2 ತೀವ್ರತೆಯ ಭೂಕಂಪದಲ್ಲಿ 96 ಮಂದಿ ಸಾವನ್ನಪ್ಪಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ