ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಬಂದ್ ಆಚರಿಸಲಾಯಿತು

ಬಾಗಲಕೋಟೆ, ಫೆ.17-ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಇಂದು ಬಂದ್ ಆಚರಿಸಲಾಯಿತು.

ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದ್‍ಗೆ ಕರೆ ನೀಡಿದ್ದು , ಇಂದು ಎಲ್ಲೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‍ಗೆ ಬೆಂಬಲ ಸೂಚಿಸಲಾಯಿತು.

ಬಸ್ ಸಂಚಾರವು ವಿರಾಳವಾಗಿದ್ದು , ಮುಂಜಾಗ್ರತ ಕ್ರಮವಾಗಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಮನವಿ ಮಾಡಿದ್ದರೂ ಬಜೆಟ್‍ನಲ್ಲಿ ಅದನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಇಂದು ಬಂದ್ ನಡೆಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ