ಸರ್ಕಾರಿ ಕಾಲೇಜಿನ ಮೇಲ್ಛಾವಣಿ ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು , ಒಬ್ಬರ ಸ್ಥಿತಿ ಗಂಭೀರವಾಗಿದೆ.

ಮಾಲೂರು, ಫೆ.17-ಸರ್ಕಾರಿ ಕಾಲೇಜಿನ ಮೇಲ್ಛಾವಣಿ ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು , ಒಬ್ಬರ ಸ್ಥಿತಿ ಗಂಭೀರವಾಗಿದೆ.

ವಿದ್ಯಾರ್ಥಿನಿಯರಾದ ಮಮತಾ, ಶೋಭಾ, ಆಶಾ, ಮೋನಿಶಾ ಗಾಯಗೊಂಡಿದ್ದು ,ಅರುಣಾವತಿ ಸ್ಥಿತಿ ಗಂಭೀರವಾಗಿದೆ.
ಮಾಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಬೆಳಗ್ಗೆ ತರಗತಿ ನಡೆಯುತ್ತಿದ್ದ ವೇಳೆ ಕೊಠಡಿಯೊಂದರ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

ಪ್ರಾಂಶುಪಾಲ ಹಾಗೂ ಉಪನ್ಯಾಸಕರು ಪರಿಶೀಲನೆ ನಡೆಸುತ್ತಿದ್ದು , ಮಾಲೂರು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

(ಪ್ರಾತಿನಿಧ್ಯಕ್ಕಾಗಿ ಮಾತ್ರ ಪೋಸ್ಟ್ ಮಾಡಲಾದ ಫೋಟೋ, ಮೂಲವಲ್ಲ)

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ