
ವಿಜಯಪುರ, ಫೆ. 17-ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪ್ಟಿರುವ ಘಟನೆ ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಮನಗೌಡ ಮಾಲಗತ್ತಿ (23), ಪ್ರವೀಣ್ ಪತ್ತಾರ್(25) ಮೃತ ದುರ್ದೈವಿಗಳು.
ಮುದ್ದೆಬಿಹಾಳ ತಾಲೂಕಿನ ಕೊಣ್ಣೂರು ಗ್ರಾಮದ ಬಳಿ ಇಂದು ಬೆಳಗ್ಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.
ಈ ಸಂಬಂಧ ತಾಳಿಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
(ಪ್ರಾತಿನಿಧ್ಯಕ್ಕಾಗಿ ಮಾತ್ರ ಪೋಸ್ಟ್ ಮಾಡಲಾದ ಫೋಟೋ, ಮೂಲವಲ್ಲ)