ಹ್ಯಾರಿಸ್ ಪುತ್ರನ ವಿರುದ್ಧ ದೂರು: ಕಾನೂನು ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಶಾಸಕ ಎನ್‍.ಎ. ಹ್ಯಾರಿಸ್ ಪುತ್ರನ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿಯವರು, ತಪ್ಪು ಮಾಡಿದವರು ಯಾರೇ ಆಗಲಿ, ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ತಕ್ಷಣ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೂ

ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.

ಕಳೆದ ರಾತ್ರಿ ಹ್ಯಾರಿಸ್‍ ಅವರ ಪುತ್ರ ಮೊಹಮ್ಮದ್‍ ನಲಪಾಡ್ ಹ್ಯಾರಿಸ್ ಯುಬಿ ಸಿಟಿಯ ರೆಸ್ಟೊರೆಂಟ್‍ ಒಂದರಲ್ಲಿ ವಿದ್ವತ್‍

ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕಬ್ಬನ್‍ ಪಾರ್ಕ್‍ ಪೊಲೀಸ್‍ ಠಾಣೆಯಲ್ಲಿ ಪ್ರಕರಣ

ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ