ಲಾರಿ-ಬೈಕ್‍ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

ನೆಲಮಂಗಲ, ಫೆ.18-ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಹನುಮಂತಪುರ ನಿವಾಸಿಗಳಾದ ಆನಂದ್(45), ಮಗ ವಿಶಾಲ್(9), ಬಾಮೈದ ಶಶಿಧರ್(22) ಮೃತ ದುರ್ದೈವಿಗಳು.

ಈ ಮೂವರು ಸಂಬಂಧಿಕರ ಮದುವೆಗೆಂದು ನೆಲಮಂಗಲದ ಎಸ್‍ಎಲ್‍ಆರ್ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದರು. ಈ ವೇಳೆ ಬೊಮ್ಮನಹಳ್ಳಿ ಗೇಟ್ ಸಮೀಪ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಯನ್ನು ಕಾರೊಂದು ಓವರ್ ಟೇಕ್ ಮಾಡಿದೆ.

ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಗೆ ನುಗ್ಗಿ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆ ರಭಸಕ್ಕೆ ಈ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಲ್ಲದೆ ಬೈಕ್ ಹಿಂಭಾಗದಲ್ಲಿ ಬರುತ್ತಿದ್ದ ಮಿನಿಬಸ್‍ಗೂ ಲಾರಿ ಡಿಕ್ಕಿ ಹೊಡೆದಿದೆ. ಅದರಲ್ಲಿದ್ದ ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು , ಲಾರಿಯನ್ನು ಪೆÇಲೀಸರು ವಶಪಡಿಸಿಕೊಂಡಿದ್ದಾರೆ.

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

(ಪ್ರಾತಿನಿಧ್ಯಕ್ಕಾಗಿ ಮಾತ್ರ ಪೋಸ್ಟ್ ಮಾಡಲಾದ ಫೋಟೋ, ಮೂಲವಲ್ಲ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ