ರಾಜ್ಯದ ಜನತೆಗೆ ಸಮಬಾಳು ಸಾಮರಸ್ಯ ಎನ್ನುವಂತೆ ಬಜೆಟ್ ಮಂಡಿಸಿರುವುದು ತೃಪ್ತಿ ನೀಡಿದೆ – ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಫೆ.18- ರಾಜ್ಯದ ಜನತೆಗೆ ಸಮಬಾಳು ಸಾಮರಸ್ಯ ಎನ್ನುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿರುವುದು ತೃಪ್ತಿ ನೀಡಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದಾವಣಗೆರೆ ಹೊರವಲಯದ ಮದಾನಹಳ್ಳಿ ಮಂಡಕ್ಕಿಬಟ್ಟಿ ಸಮೀಪ ನಿವೇಶನ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದ ಅವರು ಮುಖ್ಯಮಂತ್ರಿಯವರು ಎಲ್ಲರಿಗೂ ಸಹಕಾರಿಯಾಗುವಂತಹ ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸಿದ್ದರಾಮೇಶ್ವರ ಬಡಾವಣೆ, ಬಾಷನಗರದ ಜನರು ಕಳೆದ 40 ವರ್ಷಗಳಿಂದ ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡುತ್ತಿದ್ದರು. ಅವರಿಗೆಲ್ಲ ಹಕ್ಕುಪತ್ರ ನೀಡಿದ್ದು ಕಾಂಗ್ರೆಸ್ ಸರ್ಕಾರ ಎಂದರು.

ಜಿಲ್ಲೆಯಲ್ಲಿ ಒಟ್ಟು 444 ಕೋಟಿ ರೂಗಳನ್ನು ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಲಾಗಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟಿನ್ ಮುಂತಾದ ಜನಪರ ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿ ಅವರು ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ತಿಳಿಸಬೇಕೆಂದು ಕರ್ಯಕರ್ತರಿಗೆ ಹೇಳಿದರು.
ವಿರೋಧ ಪಕ್ಷಗಳ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

ಮೇಯರ್ ಅನಿತಾಬಾಯಿ ಮಾಲ್ತೇಶ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಹೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಮತ್ತಿತರರು ಉಪಸ್ಥಿತರಿದ್ದರು.

 

(ಪ್ರಾತಿನಿಧ್ಯಕ್ಕಾಗಿ ಮಾತ್ರ ಪೋಸ್ಟ್ ಮಾಡಲಾದ ಫೋಟೋ, ಮೂಲವಲ್ಲ)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ