ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನೆಲಪಾಡ್ ಪೊಲೀಸರಿಗೆ ಶರಣು

ಬೆಂಗಳೂರು:ಫೆ-19: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಶಾಸಕ ಹ್ಯಾರಿಸ್ ಪುತ್ರ ಆರೋಪಿ ಮೊಹಮ್ಮದ್‌ ನಲಪಾಡ್ ಇದೀಗ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ.

ಕೊನೆಗೂ ಹಲ್ಲೆ ಘಟನೆ ನಡೆದ 36 ಗಂಟೆಗಳ ನಂತರ ನಲಪಾಡ್ ಆಟೊದಲ್ಲಿ ಬಂದು ಪೊಲೀಸರ ಮುಂದೆ ಹಾಜರಾಗಿದ್ದಾನೆ. ಠಾಣೆಗೆ ಬಂದ ನಲಪಾಡ್ ಹ್ಯಾರಿಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ನಡುವೆ ಪೊಲೀಸ್ ಠಾಣೆ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ನಡೆದಿದೆ. ಶಾಸಕ ಹ್ಯಾರಿಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾರಾಮಾರಿ ಉಂಟಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ.

ಮಹಮ್ಮದ್ ನಲಪಾಡ್‌ ಯುಬಿ ಸಿಟಿಯಲ್ಲಿ ವಿದ್ವತ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಗಾಯಗೊಂಡು ಮಲ್ಯ ಆಸ್ಪತ್ರೆ ಸೇರಿದ್ದ ವಿದ್ವತ್‌ ಬಳಿ ಹೋಗಿ ಅವರಿಗೆ ಮತ್ತು ಸೋದರನಿಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ನಲಪಾಡ್‌ ಕಾನೂನು ರೀತಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Congress MLA’s son, Mohammed Haris Nalapad, surrenders

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ