
ಮಂಗಳೂರು:ಫೆ-20: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ಬದಲಿಸಬೇಕೆನ್ನುವುದು ಜನರ ಆಶಯವಾಗಿದೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಹಾಗೂ ರಾಜ್ಯ ಬಿಜೆಪಿ ಗೆಲುವು ದಕ್ಷಿಣ ಭಾರತಕ್ಕೆ ಹೆಬ್ಬಾಗಿಲು ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಲ್ಕುಂದದಲ್ಲಿ ಆಯೋಜಿಸಿರುವ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದ ಶಾ, ಕೇಂದ್ರ ಸರ್ಕಾರ 80 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದೆ. ಆದರೆ, ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಏನು ಮಾಡಿದೆ ಎಂದು ನಾವು ಪ್ರಶ್ನಿಸಬೇಕಾಗಿದೆ ಎಂದರು.
ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಬಗ್ಗೆ ಮಾತನಾಡಿದರು. ಅಲ್ಲದೇ ಮೊಹಮ್ಮದ್ ನಲಪಾಡ್ ಹ್ಯಾರಿಸ್ ನಿಂದ ಹಲ್ಲೆಗೊಳಗಾಗಿಆಸ್ಪೆತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನಮ್ಮ ಕಾರ್ಯಕರ್ತ ಎಂದು ಹೇಳಿದರು.
BJP, Amit Shah,Karnataka,Election Campaign