ಬೆಂಗಳೂರು, ಫೆ.20-ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹಗಲು ದರೋಡೆ ನಡೆಯುತ್ತಿದ್ದರೂ ಅದನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಇಂದು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ರೂವಾರಿ ನೀರವ್ ಮೋದಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಪರ್ಸೆಂಟ್ ಹಣ ಪಡೆದಿದ್ದಾರೆಂದು ತಿಳಿಸಬೇಕು, ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ಅವರು ರಾಜ್ಯ ಹಾಗೂ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ದೇಶದಲ್ಲಿ ಹಗಲು ದರೋಡೆ ನಡೆಸಿ, ಬ್ಯಾಂಕ್ಗಳನ್ನು ವಂಚಿಸಿ ಪರಾರಿಯಾಗಿರುವ ವಿಜಯ್ ಮಲ್ಯಾ, ಐಪಿಎಲ್ ಹಗರಣದ ಲಲಿತ್ ಮೋದಿ, ಈಗ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ನೀರವ್ ಮೋದಿ ಇವರೆಲ್ಲರೂ ವಿದೇಶದಲ್ಲಿ ತಂಗಲು ಕೇಂದ್ರ ಸರ್ಕಾರ ವ್ಯವಸ್ಥೆ ಕಲ್ಪಿಸಿದೆಯೇ ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಂಸ್ಕøತಿ ಇಲ್ಲದ ಅನಂತ್ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಿರುವುದು ದುರಂತ. ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಕಿಡಿಕಾರಿದರು.
ಇದೇ ವೇಳೆ ಮಹಾತ್ಮಗಾಂಧಿ ಪ್ರತಿಮೆ ಬಳಿ ನೀರವ್ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.