
ಪಟಿಯಾಲ, ಫೆ.20-ಆಹಾರ ಸಂಸ್ಕರಣಾ ಘಟಕವೊಂದರಲ್ಲಿ ಸ್ಪೋಟದಿಂದ ಅಮೋನಿಯಾ ಅನಿಲ ಸೋರಿ ನಾಲ್ವರು ಮೃತಪಟ್ಟು, ಇತರ 11 ಮಂದಿ ಆಸ್ವಸ್ಥರಾಗಿರುವ ಘಟನೆ ಪಂಜಾಬ್ನ ಪಟಿಯಾಲ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಅಸ್ವಸ್ಥರಾದವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಆಹಾರ ಸಂಸ್ಕರಣೆ ಘಟಕದ ಒಳಗೆ ಅಮೋನಿಯಾ ತುಂಬಿದ್ದ ಸಿಲಿಂಡರ್ ಸ್ಫೋಟಗೊಂಡಿತು. ನಂತರ ಅನಿಲ ಆ ಪ್ರದೇಶವನ್ನು ವ್ಯಾಪಿಸಿ ಈ ದುರ್ಘಟನೆ ಸಂಭವಿಸಿತು ಎಂದು ಪೆÇಲೀಸರು ತಿಳಿಸಿದ್ದಾರೆ.
ಸ್ಫೋಟದ ಶಬ್ಧ ಹತ್ತಿರದ ಗ್ರಾಮಕ್ಕೂ ಕೇಳಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.