ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಾರಾಯಣಸ್ವಾಮಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ಬೆಂಗಳೂರು, ಫೆ.20-ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿಯನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ನಾರಾಯಣಸ್ವಾಮಿ ವಿರುದ್ಧ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದ್ದು, ಈ ಸಂಬಂಧ ಪರಮೇಶ್ವರ್ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಿದ್ದಾರೆ.

ಜಮೀನು ಪರಭಾರೆ ವಿಚಾರದಲ್ಲಿ ಖಾತೆ ಮಾಡಿಸುವ ಸಂಬಂಧ ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ನಾರಾಯಣಸ್ವಾಮಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ