ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‍ಬಿ) ವಂಚನೆ ಪ್ರಕರಣ ವಿಶೇಷ ತನಿಖಾ ತಂಡದಿಂದ ತನಿಖೆ

ನವದೆಹಲಿ, ಫೆ.20-ಬ್ಯಾಂಕಿಂಗ್ ಕ್ಷೇತ್ರವನ್ನೇ ಬೆಚ್ಚಿ ಬೀಳಿಸಿದ 11,500 ಕೋಟಿ ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‍ಬಿ) ವಂಚನೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ(ಎಸ್‍ಐಟಿ) ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತು ಸುಪ್ರೀಂಕೋರ್ಟ್ ಫೆ.23ರ ಶುಕ್ರವಾರ ವಿಚಾರಣೆ ನಡೆಸಲಿದೆ.

ಈ ಸಂಬಂಧ ನಿನ್ನೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ಪ್ರಕರಣದ ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಫೆ.23ರಂದು ಎಸ್‍ಐಟಿ ತನಿಖೆ, ಪ್ರಮುಖ ಆರೋಪಿ ನೀರವ್ ಮೋದಿಯನ್ನು ವಿದೇಶದಿಂದ ದೇಶಕ್ಕೆ ಹಸ್ತಾಂತರ ಸೇರಿದಂತೆ ಕೆಲವು ವಿಷಯಗಳ ಬಗ್ಗೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ