ನವದೆಹಲಿ, ಫೆ.20-ಮಲಯಾಳಂ ಹಾಡಿನ ಮೂಲಕ ಇಂಟರ್ನೆಟ್ ಸೆನ್ಸೇಷನ್ ಆಗಿರುವ ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ನಾಳೆ ಈ ಪ್ರಕರಣದ ವಿಚಾರಣೆ ನಡೆಯಲಿದೆ.
ಒರು ಅಡಾರ್ ಲವ್ ಸಿನಿಮಾದ ಮಾಣಿಕ್ಯ ಮಲರಾಯ ಪೂವಿ ಹಾಡಿನಿಂದ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಈಕೆಯ ವಿರುದ್ಧ ಎಫ್ಐಆರ್ಗಳು ದಾಖಲಾಗಿದ್ದವು.
ಈ ಸಂಬಂಧ ತಮ್ಮ ವಕೀಲ ಹ್ಯಾರಿಸ್ ಬೀರಾನ್ ಅವರ ಮೂಲಕ ಸುಪ್ರೀಂಕೋರ್ಟ್ ಮೊರೆ ಹೋಗಿರುವ 18 ವರ್ಷದ ಪ್ರಿಯಾ, ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.
ಈ ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂದು ಕೋರಿ ಪ್ರಿಯಾ ಪರ ವಕೀಲರು ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ನಾಳೆ ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದೆ.