
ನವದೆಹಲಿ, ಫೆ.20- ಇಬ್ಬರು ಮೇಯರ್‍ಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ವಿವಾದಕ್ಕೆ ಗುರಿಯಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಅಮ್ ಆದ್ಮಿ ಪಾರ್ಟಿ (ಎಎಪಿ) ಶಾಸಕರು ಮತ್ತೊಮ್ಮೆ ಪುಂಡಾಟ ನಡೆಸಿದ್ದಾರೆ.
ಕಳೆದ ರಾತ್ರಿ ಮುಖ್ಯಮಂತ್ರಿಯವರ ನಿವಾಸದಲ್ಲಿ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ಮಾಡಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುಷ್ ಪ್ರಕಾಶ್ ಆರೋಪಿಸಿದ್ದಾರೆ.
ಆದರೆ, ಈ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿಯವರ ಕಾರ್ಯಾಲಯ ಇದೊಂದು ವಿಲಕ್ಷಣ ಮತ್ತು ಆಧಾರ ರಹಿತ ಹೇಳಿಕೆ ಎಂದು ಪ್ರತಿಕ್ರಿಯಿಸಿದೆ.
ಜಾಹೀರಾತು ವಿಷಯಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾತ್ರಿ ಸಿಎಂ ನಿವಾಸದಲ್ಲಿ ಸಭೆ ಇತ್ತು. ಆ ಸಂದರ್ಭದಲ್ಲಿ ತಮ್ಮ ಜತೆ ಜಗಳವಾಡಿದ ಮೂವರು ಆಪ್ ಶಾಸಕರು ಹಲ್ಲೆ ಮಾಡಿದ್ದರು ಎಂದು ಪ್ರಕಾಶ್ ದೂರಿದ್ದಾರೆ.