ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ ಕಲ್ಪಿಸುವ ಸಂಬಂಧ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ

ಬೆಂಗಳೂರು, ಫೆ.21-ಖಾಸಗಿ ವಲಯದ ಉದ್ಯಮಿಗಳಲ್ಲಿ ಸಿ ಮತ್ತು ಡಿ ವೃಂದದ ಉದ್ಯೋಗಗಳಲ್ಲಿ ಸ್ಥಳೀಯರಿಗೆ (ಕನ್ನಡಿಗರಿಗೆ) ಶೇ.100ರಷ್ಟು ಉದ್ಯೋಗ ಕಲ್ಪಿಸುವ ಸಂಬಂಧ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆದಿದ್ದು, ಅನುಷ್ಠಾನದ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿಧಾನಪರಿಷತ್‍ಗೆ ತಿಳಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಗಣೇಶ್ ಕಾರ್ನಿಕ್ ಅವರ ಪ್ರಶ್ನೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರವಾಗಿ ಉತ್ತರಿಸಿದ ಸಚಿವರು, ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವೃಂದದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ ಒದಗಿಸಲು 2017-18ನೆ ಸಾಲಿನ ಆಯವ್ಯಯದ ಭಾಷಣದಲ್ಲಿ ಘೋಷಿಸಲಾಗಿತ್ತು. ಇದರ ಅನುಷ್ಠಾನದ ಸಾಧಕ-ಬಾಧಕಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆದಿದ್ದು, ಭಾರತ ಸಂವಿಧಾನದ ಆರ್ಟಿಕಲ್ಸ್ ಅಡಿ ಪರಿಶೀಲಿಸಿ ಹಾಲಿ ಇರುವ ಕರ್ನಾಟಕ ಇಂಡಸ್ಟ್ರಿಯಲ್ ಎಂಪ್ಲಾಯ್‍ಮೆಂಟ್ ಸ್ಟ್ಯಾಡಿಂಗ್ ಆರ್ಡರ್ ಕಾಯ್ದೆ 1961ಕ್ಕೆ ತಿದ್ದುಪಡಿ ಆಗಲಿ, ಸೇರ್ಪಡೆಯಾಗಲಿ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸೂಕ್ತ ತೀರ್ಮಾನವಾದ ನಂತರ ಶೇ.100ರಷ್ಟು ಉದ್ಯೋಗ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ