ಮೈಸೂರು, ಫೆ.21-ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಆರ್ಥಿಕ ವ್ಯವಹಾರ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ನಗರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣಕ್ಕೆ ಘೋಷಣೆ ಮಾಡಿದ್ದಾರೆ. ಈ ರಸ್ತೆಗಾಗಿ 2919 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಭೂಸ್ವಾಧೀನ ಹಾಗೂ ಕಾಮಗಾರಿ ಪೂರ್ವ ಚಟುವಟಿಕೆಗಾಗಿ ಈಗ 81 ಕೋಟಿ ರೂ.ಗಳನ್ನು ಮೀಸಲಾಗಿದೆ ಎಂದು ಅವರು ತಿಳಿಸಿದರು.
ಈ ಯೋಜನೆಯ ಅಂದಾಜು ವೆಚ್ಚ 2,919 ಕೋಟಿ ರೂ. ಆಗಿದ್ದು, ಈ ಯೋಜನೆಯಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.