ಈ ವಾರ ತೆರೆಗೆ ‘ಟಗರು’

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸಿರುವ, ಸೂರಿ ನಿರ್ದೇಶನದ `ಟಗರು` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸೂರಿ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವೀನಸ್ ಎಂಟರ್ ಟೈನರ್ ಮೂಲಕ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡಿದ್ದಾರೆ.

ಚರಣ್‍ರಾಜ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಸುರೇಶ್ ಕಲಾ ನಿರ್ದೇಶನ, ಸೂರಿ ನೃತ್ಯ ನಿರ್ದೇಶನ ಹಾಗೂ ಸೂರಿ, ಜಾಲಿ ಬಾಸ್ಟಿನ್, ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ನಾಗೇಂದ್ರ ಪ್ರಸಾದ್ ಬರೆದಿದ್ದಾರೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಮಾನ್ವಿತಾ ಹರೀಶ್, ಭಾವನಾರಾವ್, ಧನಂಜಯ್, ದೇವರಾಜ್, ವಸಿಷ್ಠ ಸಿಂಹ, ಅಚ್ಯುತ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ