
ಶ್ರೀನಗರ, ಫೆ.22-ಕಣಿವೆ ರಾಜ್ಯ ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಇಂದು ಮತ್ತೆ ಪುಂಡಾಟ ಮುಂದುವರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಾರತೀಯ ಸೇನಾ ಠಾಣೆಗಳನ್ನು ಗುರಿಯಾಗಿಟ್ಟುಕೊಂಡು ಪಾಕ್ ರೇಂಜರ್ಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕೆಲವು ಯೋಧರು ಗಾಯಗೊಂಡಿದ್ದಾರೆ.
ಪಾಕಿಸ್ತಾನಿ ಸೈನಿಕರ ಕದನ ವಿರಾಮ ಉಲ್ಲಂಘನೆ ಮತ್ತು ಉದ್ಧಟತನಕ್ಕೆ ಭಾರತೀಯ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕ್ ಅಪ್ರಚೋದಿತ ದಾಳಿ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.