ಅರ್ಕಾವಾತಿ ವಿವಾದ – ಕೆಂಪಣ್ಣ ಆಯೋಗ ನೀಡಿರುವ ವರದಿಯನ್ನು ಬಹಿರಂಗ ಪಡಿಸುವುದಾಗಿ ಸಿಎಂ

Varta Mitra News

ಬೆಂಗಳೂರು, ಫೆ.22- ಅರ್ಕಾವಾತಿ ವಿವಾದ ಕುರಿತು ಕೆಂಪಣ್ಣ ಆಯೋಗ ನೀಡಿರುವ ವರದಿಯನ್ನು ಈ ಸದನದಲ್ಲೂ ಮಂಡಿಸಲಾಗುವುದು. ಸಾರ್ವಜನಿಕವಾಗಿಯೂ ಬಹಿರಂಗ ಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆದ ಚರ್ಚೆಗೆ ವಿಧಾನಸಭೆಯಲ್ಲಿಂದು ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಂಪಣ್ಣ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಅರ್ಕಾವತಿ ರೀಡು ಪ್ರಕರಣದಲ್ಲಿ ಈ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದರ ಜತೆಗೆ ಇನ್ನೂ ಕೆಲವು ಶಿಫಾರಸುಗಳನ್ನು ಮಾಡಿದ್ದು, ಅದರ ಪರಿಶೀಲನೆಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ ವರದಿ ನೀಡಿದ ಬಳಿಕ ಕÉಂಪಣ್ಣ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದು. ಸಾರ್ವಜನಿಕವಾಗಿಯೂ ಬಹಿರಂಗ ಪಡಿಸುವುದಾಗಿ ಹೇಳಿದರು.

ನಾವು ಯಾವುದೇ ತಪ್ಪು ಮಾಡಿಲ್ಲ, ಯಾವುದನ್ನೂ ಮುಚ್ಚಿಡುವ ಅಗತ್ಯವಿಲ್ಲ ಎಂದ ಸಿಎಂ ಹೇಳಿದಾಗ ಪ್ರತಿ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಕೆಂಪಣ್ಣ ಆಯೋಗ ವರದಿಯನ್ನು ಬಹಿರಂಗ ಪಡಿಸಲು ವಿಳಂಬ ಮಾಡುತ್ತಿರುವುದೇಕೆ? ಅದರಲ್ಲಿರುವ ಮಾಹಿತಿಯನ್ನು ಹೊರ ಹಾಕಿ ಎಂದು ಪದೇ ಪದೇ ಸವಾಲು ಹಾಕಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ