ಅನಾರೋಗ್ಯ ಹಿನ್ನಲೆ: ರಾಜ್ಯ ಪ್ರವಾಸ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳಿದ ಅಮಿತ್ ಶಾ

ಮಂಗಳೂರು:ಫೆ-22: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಪ್ರವಾಸವನ್ನು ಅಂತ್ಯಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಶಾ ಕರಾವಳಿ ಪ್ರವಾಸದ ಮೂಲಕ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದರು. ಆದರೆ ಅನಾರೋಗ್ಯ ಹಿನ್ನಲೆಯಲ್ಲಿ ತಮ್ಮ ರಾಜ್ಯ ಪ್ರವಾಸ ಅರ್ಧಕ್ಕೆ ಅಂತ್ಯಗೊಳಿಸಿದ್ದಾರೆ ಎನ್ನಲಾಗಿದೆ.

ಕೋಮು ಗಲಭೆಯಲ್ಲಿ ಮೃತಪಟ್ಟ ಪರೇಶ್ ಮೇಸ್ತ ಮನೆಗೆ ನಿನ್ನೆ ಭೇಟಿ ನೀಡಿದ ಅಮಿತ್ ಶಾ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಮಿತ್ ಶಾ ಅವರಗೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಶಾಸಕ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರೂ ಕೂಡ ಪರೇಶ್ ಮನೆಗೆ ಭೇಟಿ ನೀಡಿ 20 ನಿಮಿಗಳ ಕಾಲ ಪರೇಶ್ ಅವರ ತಂದೆಯೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪರೇಶ್ ಅವರ ಸಾವಿನ ತನಿಖೆಯನ್ನು ಸಿಬಿಐ ನಡೆಸಲಿದೆ ಎಂದು ಭರವಸೆ ನೀಡಿದರು.

ಈ ನಡುವೆ ಅಮಿತ್ ಶಾ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಜ್ಯ ಪ್ರವಾಸವನ್ನು ಮಧ್ಯದಲ್ಲಿಯೇ ಅಂತಿಮ ಗೊಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.

ಅಮಿತ್ ಆವರ ಗೋಕರ್ಣ ಹಾಗೂ ಕುಮಟಾ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಬೇಕಿತ್ತು. ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಅಂತ್ಯಗೊಳಿಸಿ ವಾಪಸ್ ಆಗಿದ್ದಾರೆ.

Karnataka Assembly poll, BJP,Amit Shah, Health problem

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ