ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಗೆ ಸಿಕ್ತು ಮೊಬೈಲ್ ಫೋನ್!

ಬೆಂಗಳೂರು: ಉದ್ಯಮಿಯೊಬ್ಬರ ಪುತ್ರನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ಮಹಮ್ಮದ್ ನಲಪಾಡ್ ಜೈಲು ಸೇರಿದ್ದು, ಇದೀಗ ಜೈಲಿನಲ್ಲೂ ತಮ್ಮ ದರ್ಬಾರ್ ಮುಂದುವರೆಸಿದ್ದಾನೆ ಎಂದು ವರದಿಯಾಗಿದೆ.

ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಕೈಗೆ ಮೊಬೈಲ್ ಸಿಕ್ಕಿದೆ. ಗುರುವಾರ ಮಧ್ಯಾಹ್ನದಿಂದ ನಲಪಾಡ್ ಕೈಯಲ್ಲಿ ಮೊಬೈಲ್ ರಿಂಗ್ ಆಗುತ್ತಿತ್ತು ಎಂಬುದರ ಬಗ್ಗೆ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಈ ಮೂಲಕ ರೌಡಿ ನಲಪಾಡ್ ಗೆ ಜೈಲಿನಲ್ಲೂ ರಾಜಾತಿಥ್ಯ ಸಿಗುತ್ತಿದೆ ಎನ್ನಲಾಗಿದೆ. ಮೊಬೈಲ್ ಫೋನ್ ಮೂಲಕ ಸಂಪರ್ಕದಲ್ಲಿರೋ ನಲಪಾಡ್, ತನ್ನ ಸ್ನೇಹಿತರಿಗೆ ಕರೆ ಮಾಡಿ ಜಾಮೀನು ಅರ್ಜಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾನೆ. ಅಲ್ಲದೇ ಕಳೆದ ರಾತ್ರಿ ನಲಪಾಡ್‍ಗೆ ಅದ್ದೂರಿ ಭೋಜನ ವ್ಯವಸ್ಥೆ ಕೂಡ ಮಾಡಲಾಗಿದೆ. ಆರೋಪಿ ಮಂಜುನಾಥ್ ಮನೆಯಿಂದ ಆರೋಪಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂಬುದಾಗಿ ತಿಳಿದುಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ