ಮಡಿಕೇರಿಯಲ್ಲಿ ಶೂಟೌಟ್: ಮಹಿಳೆ ಕೊಲೆ!

ಕೊಡಗು: ವ್ಯಕ್ತಿಯೋರ್ವ ಪಕ್ಕದ ಮನೆಯ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದಲ್ಲಿ ನಡೆದಿದೆ.

ಕಾಲೂರು ನಿವಾಸಿ ಚೋಂದಮ್ಮ ಅಲಿಯಾಸ್ ಲಲಿತಾ ಕೊಲೆಗೀಡಾದ ದುರ್ದೈವಿ. ಪಕ್ಕದ ಮನೆಯ ಧರ್ಮರಾಜ್ ಎಂಬಾತ ಗುಂಡು ಹಾರಿಸಿ ಕೊಲೆ ಮಾಡಿದ್ದು, ನಂತರ ತಾನೂ ಗುಂಡು ಹಾರಿಸಿಕೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಯಾರೂ ಮನೆಯಲ್ಲಿ ಇಲ್ಲದ ವೇಳೆ ಈ ಕೃತ್ಯ ನಡೆದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ