
ಬೆಂಗಳೂರು, ಫೆ.23- ಬೆಳಗಾವಿಯ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿಂದು ಸರ್ಕಾರವನ್ನು ಒತ್ತಾಯಿಸಿದರು.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಮೂರು ಲೋಕಸಭಾ, 18 ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದ್ದು ವಿಸ್ತಾರವಾಗಿದೆ. ಜಿಲ್ಲಾ ಕೇಂದ್ರಕ್ಕೆ ಬರಬೇಕೆಂದರೆ ಸಾರ್ವಜನಿಕರು 200ಕಿಮೀ ಪ್ರಯಾಣಿಸುವ ಅಗತ್ಯವಿದೆ. ಹೀಗಾಗಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದರು.
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಚಿಕ್ಕೋಡಿ ಮತ್ತು ಗೋಕಾಕ್ಗಳನ್ನು ಜಿಲ್ಲೆ ಮಾಡಬೇಕೆಂದು ಪ್ರಸ್ತಾಪವಿತ್ತು. ಆದರೆ, ಇದುವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹೊಸ ಜಿಲ್ಲೆಗಳು ರಚನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು