ಅಥಣಿ:ಫೆ-23: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಂಬೈ ಕರ್ನಾಟಕದ ಜಿಲ್ಲೆಗಳಿಗೆ ಬರುತ್ತಿರುವುದು ಈ ಭಾಗದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನಾಳೆಯಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಬೆಳಗಾವಿಯ ಅಥಣಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದ ಸಿದ್ಧತೆ ಅವಲೋಕಿಸಿ ಮಾತನಾಡಿದ ಸಚಿವರು, ಸಭೆಯಲ್ಲಿ 3 ರಿಂದ 5 ಲಕ್ಷ ಜನರು ಸೇರಲಿದ್ದಾರೆ. ರಾಹುಲ್ ಗಾಂಧಿಯವರ ಭಾಷಣ ಇಲ್ಲಿನ ಜನತೆಗೆ ಸ್ಪೂರ್ತಿದಾಯಕವಾಗಲಿದೆ ಎಂದರು.
2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾನು ಮಂತ್ರಿಯಾದ ಕೂಡಲೇ ಜಿಲ್ಲೆಯಲ್ಲಿ ಹತ್ತು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡ್ತೇನೆ ಅಂತ ಭರವಸೆ ಕೊಟ್ಟಿದ್ದೆ. ಹತ್ತಕ್ಕಿಂತಲೂ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳನ್ನು ಜಿಲ್ಲೆಯಲ್ಲಿ ಗೆಲ್ಲಿಸಿಕೊಡುತ್ತೇವೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದ್ದೇವೆ ಎಂದು ತಿಳಿಸಿದರು.
Congress Janashirvada Yatra,Karnataka,Rahul Gandhi,ramesh jarkiholi