ಬಿಬಿಎಂಪಿ ಕಛೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಬ್ಲಾಕ್ ಕಾಂಗ್ರೆಸ್ ಮುಖಂಡ ಪೊಲೀಸರಿಗೆ ಶರಣು

ಬೆಂಗಳೂರು:ಫೆ-23: ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಾಕುವುದಾಗಿ ಬೆದರಿಕೆ ಹಾಕಿದ್ದ ಕೆಆರ್ ಪುರಂನ ಬ್ಲಾಕ್ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಪೊಲೀಸರಿಗೆ ಶರಣಾಗಿದ್ದಾರೆ.

ಫೆ.16ರಂದು ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಾಕುವುದಾಗಿ ನಾರಾಯಣ ಸ್ವಾಮಿ ಧಮ್ಕಿ ಹಾಕಿದ್ದರು. ಘಟನೆ ಬಳಿಕ ತಮ್ಮ ವಿರುದ್ಧ ವ್ಯಕ್ತವಾಗಿದ್ದ ಆಕ್ರೋಶ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ನಾರಾಯಣ ಸ್ವಾಮಿ ಅವರ ಬಂಧನಕ್ಕಾಗಿ ರಾಮಮೂರ್ತಿ ನಗರ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದರು.

ಪ್ರಕರಣದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ನಾರಾಯಣ ಸ್ವಾಮಿ, ಇಂದು ಬೆಳಗ್ಗೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಜಮೀನು ಖಾತೆ ಮಾಡಿಕೊಡದಿದ್ದರೆ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವುದಾಗಿ ಅಲ್ಲಿದ್ದ ಅಧಿಕಾರಿಗಳನ್ನು ಬೆದರಿಸಿದ್ದರು. ಆಪ್ತನ ಕೈಯಲ್ಲಿದ್ದ ಪೆಟ್ರೋಲ್ ಬಾಟಲ್ ಅನ್ನು ಕಿತ್ತುಕೊಂಡು ಕಚೇರಿಯ ಕಡತಗಳಿರುವ ಕವಾಟಿಗೆ ನಾರಾಯಣ ಸ್ವಾಮಿ ಪೆಟ್ರೋಲ್ ಎರಚಿದ್ದರು. ಕೆ ಆರ್ ಪುರಂ ಶಾಸಕ ಭೈರತಿ ಬಸವರಾಜ್ ಅವರ ಆಪ್ತರಾಗಿರುವ ಜಲಮಂಡಳಿ ಸದಸ್ಯ ನಾರಾಯಣ ಸ್ವಾಮಿಯ ಗೂಂಡಾಗಿರಿ ವರ್ತನೆಯ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿತ್ತು.

Congress leader Narayanswamy,petrol inside BBMPoffice,threatening to set on fire, surrendered police

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ