ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚೆಚ್ಚು ಆವಿಷ್ಕಾರಗಳು, ಸಂಶೋಧನೆಗಳು ಅಗತ್ಯವಿದೆ

ಬೆಂಗಳೂರು,ಫೆ.22-ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚೆಚ್ಚು ಆವಿಷ್ಕಾರಗಳು, ಸಂಶೋಧನೆಗಳು ಆಗಬೇಕಾದ ಅಗತ್ಯವಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ್ ತಿಳಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕ, ಚೀನಾ, ಜಪಾನ್, ರಷ್ಯಾ ರಾಷ್ಟ್ರಗಳಲ್ಲಿ ಪ್ರತಿದಿನ ಒಂದಿಲ್ಲೊಂದು ಹೊಸ ಹೊಸ ಆವಿಷ್ಕಾರ, ಸಂಶೋಧನೆಗಳನ್ನು ನಡೆಸುತ್ತಾರೆ. ಅದೇ ರೀತಿ ನಮ್ಮ ದೇಶದಲ್ಲೂ ಆಗಬೇಕಿದೆ. ಇದಕ್ಕೆ ನಾವು ಪ್ರಾಥಮಿಕ ಹಂತದಿಂದಲೇ ಉತ್ತಮ ಶಿಕ್ಷಣವನ್ನು ನೀಡಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.

ನಾವು ಮುಂದುವರೆದ ರಾಷ್ಟ್ರಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರೆಯಬೇಕು. ಇದಕ್ಕೆ ಸಂಬಂಧ ನಮ್ಮ ಸರ್ಕಾರ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡುತ್ತದೆ. ಇದನ್ನು ಸದುಪಯೋಗಪಡಿಸಿಕೊಂಡು ಹೊಸ ಆವಿಷ್ಕಾರಗಳನ್ನು ಮಾಡುವಂತೆ ಸಲಹೆ ನೀಡಿದರು.
ನಮ್ಮ ಭಾರತ ಚಂದ್ರಯಾನ ಪ್ರವಾಸಕ್ಕೆ ಸಿದ್ದತೆ ಕೈಗೊಳ್ಳಲಾಗಿದೆ. ಆದರೆ ಅಮೆರಿಕ, ಚೀನಾ ರಾಷ್ಟ್ರಗಳು ಈಗಾಗಲೇ ಯಾನ ಮುಗಿಸಿವೆ ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಸಾಧನೆ ಮಾಡಿದಾಗ ಮಾತ್ರ ನಮ್ಮ ರಾಷ್ಟ್ರ ಅಭಿವೃದ್ಧಿಯ ಪಥದತ್ತ ಸಾಗುತ್ತದೆ. ನಾವು ಯಾವುದೇ ರಾಷ್ಟ್ರದ ಮುಂದೆ ತಲೆ ಎತ್ತಿ ನಿಲ್ಲುವಂತೆ ನಾವಿಗಾಗಲೇ ಬೆಳೆದಿದ್ದೇವೆ ಎಂದು ಹೇಳಿದರು.

ಹಿಂದೆ ಸಂಶೋಧನೆಗಳನ್ನು ಕೈಗೊಳ್ಳಬೇಕೆಂದರೆ ಅನೇಕ ವರ್ಷಗಳು ಬೇಕಾಗುತ್ತಿತ್ತು. ಆದರೆ ಪ್ರಶಸ್ತಿಗಳು ಹಾಗಿಲ್ಲ. ಸಾಕಷ್ಟು ಬದಲಾವಣೆಗಳು ಅಗಿವೆ ಎಂದ ಅವರು, ನಮ್ಮ ಸರ್ಕಾರಗಳು ಇಂತಹ ಯೋಜನೆಗಳಿಗೆ ಉತ್ತೇಜನ ನೀಡುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಕೂಡ ಇದೇ ಆಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ