ಬಹುಕೋಟಿ ರೂ.ಗಳ ಮೇವು ಹಗರಣ ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿ ಮುಂದೂಡಿಕೆ

ರಾಂಚಿ,ಫೆ.23-ಬಹುಕೋಟಿ ರೂ.ಗಳ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾದಳ(ಆರ್‍ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಇಂದು ತಳ್ಳಿ ಹಾಕಿದೆ.

ಅನಾರೋಗ್ಯ ಕಾರಣದಿಂದ ತಮಗೆ ಜಾಮೀನು ನೀಡುವಂತೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಮೇವು ಹಗರಣಗಳಿಗೆ ಸಂಬಂಧಪಟ್ಟ ಎರಡೂ ಪ್ರಕರಣಗಳಲ್ಲೂ ಸಿಬಿಐ ವಿಶೇಷ ನ್ಯಾಯಾಲಯ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ