ಸುನಂದಾ ಪುಷ್ಕರ್ ಸಾವು ಪ್ರಕರಣ: ದೆಹಲಿ ಪೊಲೀಸರಿಗೆ ಸುಪ್ರೀಂ ನೋಟೀಸ್

ನವದೆಹಲಿ:ಫೆ-23: ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೋಲೀಸರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಪೀಠ ಈ ಸಂಬಂಧ ದೆಹಲಿ ಪೋಲೀಸರಿಗೆ ನೋಟೀಸ್ ನೀಡಿದೆ. “ಪೋಲೀಸರ ಕಾರ್ಯನಿರ್ವಹಣೆಯ ಪ್ರಶ್ನೆ ಮುಂದಿಟ್ಟು ನೋಟೀಸ್ ನೀಡಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸುನಂದಾ ಪುಷ್ಕರ್ ಸಾವಿನ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಬೇಕೆಂದು ಸ್ವಾಮಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ನ್ಯಾಯಾಲಯವು ಅ. 26ರಂದು ತಳ್ಳಿ ಹಾಕಿತ್ತು. ನ್ಯಾಯಾಲಯದ ಈ ನಿಲುವನ್ನು ಪ್ರಶ್ನಿಸಿ ಸ್ವಾಮಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಜನವರಿ 17, 2014ರಲ್ಲಿ ದೆಹಲಿಯ ಪಂಚತಾರಾ ಹೋಟೆಲ್ ಒಂದರಲ್ಲಿ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢವಾಗಿ ಸಾವಿಗೀಡಾಗಿದ್ದರು. ಇವರ ಸಾವಿನ ತನಿಖೆ ನಡೆಸುವಂತೆ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಳೆದ ವರ್ಷ ದೆಹಲಿ ಹೈಕೋರ್ಟ್ ತಳ್ಳಿ ಹಾಕಿತ್ತು. ಸ್ವಾಮಿ ಅವರ ಅರ್ಜಿ ರಾಜಕೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

Sunanda Pushkar death,Supreme Court,issues notice,Delhi Police

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ