ಪ್ರಿಯಾಂಕಾ ಗಾಂಧಿ ಅವರ ನಾಯಕತ್ವಕ್ಕಾಗಿ ಕಾಯುತ್ತಿದ್ದೇನೆ : ಹಾರ್ದಿಕ್ ಪಟೇಲ್

ಮುಂಬೈ,ಫೆ.24-ನಾನು ಪ್ರಿಯಾಂಕಾ ಗಾಂಧಿ ಅವರ ನಾಯಕತ್ವಕ್ಕಾಗಿ ಕಾಯುತ್ತಿದ್ದೇನೆ ಎಂದು ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ನಾನು ವೈಯಕ್ತಿಕ ಮಟ್ಟದಲ್ಲಿ ರಾಹುಲï ಗಾಂಧಿಯನ್ನು ಇಷ್ಟಪಡುತ್ತೇನೆ; ಆದರೆ ಆತ ನನ್ನ ನಾಯಕನಲ್ಲ. ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಎಂಟ್ರಿಯನ್ನು ನಾನು ಕಾಯುತ್ತಿದ್ದೇನೆ. ಆಕೆ ರಾಜಕೀಯ ರಂಗಕ್ಕೆ ಬರಬೇಕು ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವ 25 ವರ್ಷ ಪ್ರಾಯದ ಅರ್ಹತೆಯನ್ನು ನಾನು ಹೊಂದಲಿರುವ ಹೊರತಾಗಿಯೂ 2019ರ ಲೋಕಸಭಾ ಚುನಾವಣೆಯಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಹಾರ್ದಿಕ್ ಪಟೇಲï ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ