ಬ್ರಾಹ್ಮಣ ಸಮುದಾಯ ನಾಡಿಗೆ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ – ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ.24- ಬ್ರಾಹ್ಮಣ ಸಮುದಾಯ ನಾಡಿಗೆ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದ್ದಾರೆ.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಪ್ರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯದಲ್ಲಿ ಈಗಲೂ ಅದೆಷ್ಟೋ ಜನ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ. ಇದಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕೆಂಬುದು ನ್ಯಾಯಯುತ ಬೇಡಿಕೆ ಎಂದರು.

ನನ್ನ ಕುಟುಂಬದವರು ಕೂಡ ಪ್ರತಿ ದಿನ ಬೆಳಗ್ಗೆ ನಾಲ್ಕು ಗಂಟೆಗೆ ಎದ್ದು 12 ಗಂಟೆಯವರೆಗೂ ಪೂಜೆ ಮಾಡುತ್ತಾರೆ. ನನ್ನ ತಾಯಿ ಮೇಲೆ ಆ್ಯಸಿಡ್ ದಾಳಿ ನಡೆದಾಗ ಕಂಚಿಶ್ರೀಗಳು ಅವರಿಗೆ ಸಾಂತ್ವನ ಹೇಳಿ ಹಣ್ಣು ಕೊಟ್ಟರು. ಅದನ್ನು ಅವರು ಸೇವಿಸಿ ಖುಷಿಪಟ್ಟರು. ದೈವ ಪೂಜೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ವಿಪ್ರ ಸಮುದಾಯದ ಬಗ್ಗೆ ನನಗೂ ಅಪಾರ ಗೌರವವಿದೆ ಎಂದ ಹೇಳಿದರು.

ಸಮಾಜದ ಆದರ್ಶ ಪುರಷರಾದ ಸರ್ ಎಂ.ವಿಶ್ವೇಶ್ವರಯ್ಯ ಅವರನ್ನು ಈಗಲೂ ವಿಶ್ವಾದ್ಯಂತ ಅವರ ಕೆಲಸದಿಂದಲೇ ನೆನೆಯುತ್ತಾರೆ. ಇನ್ಫೋಸಿಸ್‍ನ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರ ಸಮಾಜ ಸೇವೆ ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.

ನಾನು ಮುಂದೆ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದರೆ ತಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ. ಈಗಿನ ಕಾಂಗ್ರೆಸ್ ಸರ್ಕಾರ 2ಲಕ್ಷ ಕೋಟಿ ರೂ. ಬಜೆಟ್ ಘೋಷಿಸಿದೆ. ಆದರೆ ವಿಪ್ರ ಸಮುದಾಯದ ಅಭಿವೃದ್ಧಿಗೆ ಎಷ್ಟು ಹಣ ಕೊಟ್ಟಿದೆ ಎಂಬುದು ಮುಖ್ಯವಲ್ಲ. ಅದನ್ನು ಹೇಗೆ ಬಿಡುಗಡೆಯಾಗುತ್ತಿದೆ ಎಂದು ಮುಖ್ಯ. ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಾಧ್ಯಮಗಳಿಗೆ ಜಾಹೀರಾತು ನೀಡಿ ಜನರನ್ನು ತನ್ನತ್ತ ಸೆಳೆಯುವ ತಂತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಎಲ್ಲವನ್ನೂ ಜನರು ಅರಿತಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠವನ್ನು ಮತದಾರರು ಕಲಿಸಲಿದ್ದಾರೆ ಎಂದರು.

ನನ್ನ ಮೇಲೆ ವಿಶ್ವಾಸವಿಟ್ಟು ಎಲ್ಲಾ ಸಮುದಾಯದ ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ. ಇಂದಿನಿಂದಲೇ ಉತ್ತರ ಕರ್ನಾಟಕ ಪ್ರವಸ ಕೈಗೊಳ್ಳುತ್ತಿದ್ದು, ಮಾ.17ರವರೆಗೆ ನಿರಂತರವಾಗಿ ಜನರ ಬಳಿಗೆ ಹೋಗುತ್ತೇನೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ