ಭಕ್ತ ಕುಂಬಾರ ಸಹಿತ 4 ಕನ್ನಡ ಚಿತ್ರಗಳಲ್ಲಿ ಶ್ರೀದೇವಿ ನಟನೆ

ಬೆಂಗಳೂರು: ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಮೋಹಕ ತಾರೆ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. ಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಮಲಯಾಳಂ ತೆಲುಗು ಮತ್ತು ಕನ್ನಡ ಸಿನಿಮಾಗಳಲ್ಲೂ ಶ್ರೀದೇವಿ ನಟಿಸಿದ್ದರು. ಕನ್ನಡದ ಹೆಣ್ಣು ಸಂಸಾರದ ಕಣ್ಣು, ಭಕ್ತ ಕುಂಬಾರ. ಬಾಲಭಾರತ, ಸಂಪೂರ್ಣ ರಾಮಾಯಣ, ಯಶೋಧ ಕೃಷ್ಣ, ಹಾಗೂ ಪ್ರಿಯಾ ಸಿನಿಮಾಗಳಲ್ಲಿ ನಟಿಸಿದ್ದರು.

ಭಾರತೀಯ ಸಿನಿಮಾರಂಗದ ಖ್ಯಾತ ನಟಿ ಶ್ರೀದೇವಿ ದುಬೈನಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ತರಲಾಗುತ್ತಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ