ಶಿಷ್ಟಾಚಾರ ಉಲ್ಲಂಘನೆ: ಹಾಸನ ಡಿಸಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ

ಬೆಂಗಳೂರು:ಫೆ-25: ಶಿಷ್ಟಾಚಾರ ಉಲ್ಲಂಘನೆ ಹಿನ್ನಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿಮಾಡಲಾಗಿದೆ.

ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದ ಸಂದರ್ಭದಲ್ಲಿ ಖುದ್ದು ಹಾಜರಿದ್ದು ಶಿಷ್ಟಾಚಾರ ಪಾಲಿಸಲಿಲ್ಲ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾರ ಸೂಚನೆ ಹಿನ್ನೆಲೆ ಅಪರ ಕಾರ್ಯದರ್ಶಿ ಪಿ. ರವಿಕುಮಾರ್ ಈ ನೋಟಿಸ್ ಜಾರಿಗೊಳಿಸಿದ್ದಾರೆ. ಅನುಪಸ್ಥಿತಿಗೆ ಸೂಕ್ತ ಕಾರಣ ನೀಡಿ 3 ದಿನದ ಒಳಗೆ ಉತ್ತರ ಸಲ್ಲಿಸುವಂತೆ ರೋಹಿಣಿ ಸಿಂಧೂರಿಗೆ ಸೂಚಿಸಲಾಗಿದೆ.

Hassan deputy commissioner, Rohini Sindhuri,state government,issued,notice

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ