ವಾರಣಾಸಿ, ಫೆ.25-ಹಿರಿಯ ವಿದ್ಯಾರ್ಥಿ ಲೈಂಗಿಕ ಕಿರುಕುಳದಿಂದ ಬೇಸತ್ತು ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ವಾರಣಾಸಿಯ ಪುರಾ ಗ್ರಾಮದಲ್ಲಿ ನಡೆದಿದೆ.
ಮಿರ್ಜಾಪುರದ 11ನೇ ತರಗತಿಯ ವಿದ್ಯಾರ್ಥಿ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿ ಶನಿವಾರ ಈಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಹಿರಿಯ ವಿದ್ಯಾರ್ಥಿ ನಡವಳಿಕೆ ಬಗ್ಗೆ ಶಾಲೆಯ ಆಡಳಿತ ಮಂಡಳಿಗೆ ಮೊದಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ.
ಆರೋಪಿ ನಾಪತ್ತೆಯಾಗಿದ್ದು ಪೆÇಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.