![prajwal-revanna](http://kannada.vartamitra.com/wp-content/uploads/2018/02/prajwal-revanna-542x381.jpg)
ಬೆಂಗಳೂರು, ಫೆ.25- ಆರ್.ಆರ್.ನಗರ ಕ್ಷೇತ್ರದಲ್ಲಿ ಸ್ಪರ್ದಿಸಲು ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಆರ್.ಆರ್.ನಗರ ಜೆಡಿಎಸ್ ಸೇವಾದಳ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್ ಖಂಡಿತ ಗೆಲುವು ಸಾಧಿಸುತ್ತದೆ ಎಂದು ಹೇಳಿದರು.
ಪ್ರಜ್ವಲ್ಗೆ ಟಿಕೆಟ್ ಕೊಡದೆ ಹೋದರೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿದ ಅವರು, ಪದ್ಮನಾಭ ನಗರದ ದೇವೇಗೌಡರ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಪರವಾಗಿ ಘೋಷಣೆಗಳನ್ನು ಕೂಗಿದರಲ್ಲದೆ ಟಿಕೆಟ್ ನೀಡಿದರೆ ಜೆಡಿಎಸ್ ಕಚೇರಿ ಬಳಿ ಧರಣಿ ನಡೆಸುವುದಾಗಿ ತಿಳಿಸಿದರು.