ಕಾವೇರಿ ನಿವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಸಂಕಷ್ಟ: ದೇವೇಗೌಡ ಎಚ್ಚರಿಕೆ

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಸಂಕಷ್ಟ ಎದುರಾಗಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದರು.

ಜೆಡಿಎಸ್ ಕಚೇರಿಯಲ್ಲಿ  ಪತ್ರಿಕಾಗೋಷ್ಠಿ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಈ ಬಗ್ಗೆ ಮುಂಜಾಗೃತೆ ವಹಿಸಬೇಕಿದೆ ಎಂದರು.

ಕಾವೇರಿ ವಿವಾದ ಕುರಿತ ಸುಪ್ರೀಂ ಕೋರ್ಟ್ ಸದ್ಯದ ತೀರ್ಪಿನ ಬಗ್ಗೆ ಸಂಭ್ರಮಿಸಿದರೆ ಪ್ರಯೋಜನ ಇಲ್ಲ.  ಸರ್ಕಾರ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

14 ಟಿಎಂಸಿ ಅಡಿ ಹೆಚ್ಚುವರಿ ನೀರು ಸಿಕ್ತು ಅಂತಾ ಖುಷಿಪಡೋದಲ್ಲ. ನಮಗೆ 40 ಟಿಎಂಸಿ ಸಿಗಬೇಕಿತ್ತು ಎಂದ ಅವರತು, ಈ ಬಗ್ಗೆ  ಕೇಂದ್ರ ಸಚಿವ ಅನಂತಕುಮಾರ್ ಜೊತೆ ಮಾತಾಡಿದರೂ ಉತ್ತರ ಬಂದಿಲ್ಲ. ಸಂಸತ್ತಿನಲ್ಲಿ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತನೆ ಎಂದರು.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಆಗೋದೇ ಆದ್ರೆ ರಾಜ್ಯಕ್ಕೆ ತೊಂದರೆ ಆಗತ್ತೆ . ಈ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ವಾಸ್ತವ ಅರಿಯದೆ ಜನ ಖುಷಿ ಪಡ್ತಿದಾರೆ. ಕಾವೇರಿ ತೀರ್ಪು ಬಂದಾಗ ನಾನು ತಕ್ಷಣ ಪ್ರತಿಕ್ರಿಯೆ ನೀಡಿರಲಿಲ್ಲ.

ತೀರ್ಪನ್ನು ಪೂರ್ತಿ ಓದಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಅಂದಿದ್ದೆ. ಕಾವೇರಿ ಅಂತಿಮ ತೀರ್ಪು ಬಂದಾಗ ವಿಧಾನಸಭಾ ಅಧಿವೇಶನ ನಡೆಯುತ್ತಿತ್ತು. ಪಕ್ಷ ಭೇದ ಮರೆತು ಎಲ್ಲರೂ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ಸುಧೀರ್ಘ ಹೋರಾಟಕ್ಕೆ ಫಲ ಸಿಕ್ಕಿದೆ ಅನ್ನೋ ಭಾವನೆ ಎಲ್ಲರಲ್ಲಿದೆ. ಆದರೆ ಇದು ಸಂಭ್ರಮಿಸುವ ಸಮಯವಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ಟ್ರೀಬುನಲ್ ತೀರ್ಪು ಪ್ರಶ್ನೆ ಮಾಡಿದ್ವಿ. ಹಿರಿಯ ವಕೀಲರನ್ನ ನಾನೇ ಭೇಟಿ ಮಾಡಿ ಅವರ ಬಳಿ ಚರ್ಚೆ ನಡೆಸಿದೆ. ಆಗ ಫಾಲಿ ಎಸ್ ನಾರಿಮನ್ ಕೋಪ ಮಾಡಿಕೊಂಡಿದ್ದರು. ಆದರೂ ಪರವಾಗಿಲ್ಲ, ರಾಜ್ಯ ಕ್ಕೆ ಆಗಿರೋ ಅನ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆ ಮಾಡೋದಕ್ಕೆ ಒಪ್ಪಿಸಿದೆ.

ಆಗ ಟ್ರಿಬುನಲ್ ಅನ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗೆ ಹೋಗೋದಕ್ಕೆ ಕಾಂಗ್ರಸ್ ನಾಯಕರು ಒಪ್ಪಲಿಲ್ಲ. ನಂಜೇಗೌಡರು ಸಪೋರ್ಟ್ ಮಾಡಿದ್ರು, ಇನ್ನು ಕೆಲವರು ಒಪ್ಪಿಗೆ ಸೂಚಿಸಿದರು. ನಾವು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆವು.ಎರಡು ರಾಷ್ಟ್ರೀಯ ಪಕ್ಷಗಳನ್ನ ನಂಬಿ ಜನ ಸಂಕಷ್ಟ ದಲ್ಲಿದ್ದಾರೆ ಎಂದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ