5ಜಿ ತಂತ್ರಜ್ನಾನ ಅನುಷ್ಠಾನ ಬೇಡ; ಇದು ಮಾನವನ ಆರೋಗ್ಯ ಹಾಗೂ ಪರಿಸದ ಮೇಲೆ ದುಷ್ಪರಿಣಾಮ ಬೀರಲಿದೆ: ನಟಿ ಜ್ಯೂಹಿ ಚಾವ್ಲಾ ಆಗ್ರಹ

ಮುಂಬೈ:ಫೆ-26: 5ಜಿ ತಂತ್ರಜ್ನಾನ ಅನುಷ್ಠಾನ ಬೇಡ ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ವಿಕಿರಣ ಜಾಗೃತಿ ಅಭಿಯಾನದ ಕಾರ್ಯಕರ್ತೆ, ನಟಿ ಜ್ಯೂಹಿ ಚಾವ್ಲಾ ಒತ್ತಾಯಿಸಿದ್ದಾರೆ.

ಈ ಕುರಿತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರಕ್ಕೆ ಪತ್ರ ಬರೆದಿರುವ ಜ್ಯೂಹಿ, ಮಾನವ ಆರೋಗ್ಯದ ಮೇಲೆ ರೇಡಿಯೊ ಫ್ರೀಕ್ವೆನ್ಸಿಯ ವಿಕಿರಣದಿಂದ ಆಗುವ ಸಂಭಾವ್ಯ ಹಾನಿಕಾರಕ ಪರಿಣಾಮಗಳ ಬಗ್ಗೆ ವಿಶ್ಲೇಷಿಸದೇ 5ಜಿ ಮೊಬೈಲ್ ತಂತ್ರಜ್ಞಾನವನ್ನು ಅನುಷ್ಠಾನಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಡಿಜಿಟಲ್ ಇಂಡಿಯಾ ಗುರಿ ಸಾಧನೆ ನಿಟ್ಟಿನಲ್ಲಿ 5ಜಿ ಅನುಷ್ಠಾನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಹೊಸ ತಂತ್ರಜ್ಞಾನದ ಬಗ್ಗೆ ಸಾಕಷ್ಟು ಸಂಶೋಧನೆ ಕೈಗೊಂಡಿದೆಯೇ ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಮೊಬೈಲ್ ಟವರ್ ಆಂಟೆನಾಗಳಿಂದ ಹಾಗೂ ವೈ ಫೈ ಹಾಟ್‌ಸ್ಪಾಟ್‌ಗಳ ಎಲೆಕ್ಟ್ರೋ ಮ್ಯಾಗ್ನಟಿಕ್ ರೇಡಿಯೇಷನ್ (ಇಎಂಎಫ್) ಆರೋಗ್ಯದ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. “ಹಲವು ಮಂದಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಜ್ಞಾನಿಗಳು, ಸಾಂಕ್ರಾಮಿಕ ರೋಗ ತಜ್ಞರು ಮತ್ತು ತಂತ್ರಜ್ಞಾನ ಕ್ಷೇತ್ರದ ವೃತ್ತಿಪರರು, ಮಾನವ ಆರೋಗ್ಯದ ಮೇಲೆ ರೇಡಿಯೊಫ್ರೀಕ್ವೆನ್ಸಿ ವಿಕಿರಣದ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿಟಿಜನ್ ಫಾರ್ ಟುಮಾರೊ ಆಂದೋಲನ ಹಮ್ಮಿಕೊಂಡಿರುವ ನಟಿ ಜ್ಯೂಹಿ, ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಉತ್ತಮ ಇಂಟರ್ ನೆಟ್ ವೇಗ ಮತ್ತು ನೆಟ್‌ವರ್ಕ್ ಸುಧಾರಣೆ ನಿಟ್ಟಿನಲ್ಲಿ ಸರ್ಕಾರ 5ಜಿ ಸ್ಥಾಪನೆಗೆ ಮುಂದಾಗಿದೆ. ಆದರೆ ಅದರ ವ್ಯತಿರಿಕ್ತ ಪರಿಣಾಮವನ್ನು ಮರೆತಿದೆ ಎಂದು ಹೇಳಿದ್ದಾರೆ.

5G Technology,Juhi Chawla,CM Devendra Fadnavis,writes latter

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ